ಮಹಿಳಾ ವಿಭಾಗದ ವತಿಯಿಂದ ಶಾರದಾ ಪೂಜೆ ನೆರವೇರಿಸಲಾಯಿತು.

Spread the News...

ದೇವಾಡಿಗ ವೆಲ್ಫೇರ್ ಅಸೋಸಿಯೇಶನ್ ರಿ. ಮುಂಬಯಿ ಇದರ ಮಹಿಳಾ ವಿಭಾಗದ ವತಿಯಿಂದ ಸೆಪ್ಟೆಂಬರ್ 24 ರಂದು ಶಾರದಾ ಪೂಜೆಯನ್ನು ಸಂಘದ ಕಚೇರಿಯಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು.   ಅಪರಾಹ್ನ ಮಹಿಳಾ ವಿಭಾಗದ ಸದಸ್ಯರು ಶಾರದಾ ಪೂಜೆಯನ್ನು ಆರಂಭಿಸಿದರು. ಈ ಸಂದರ್ಭದಲ್ಲಿ ಸಂಘದ ಸದಸ್ಯರು ಭಜನೆಯನ್ನು ಶ್ರದ್ಧಾ ಭಕ್ತಿಯಿಂದ ಹಾಡಿ ಶ್ರೀ ಶಾರದಾಂಬೆಯ ಕ್ರಪೆಗೆ ಪಾತ್ರರಾದರು. ಮಂಗಳಾರತಿಯ ನಂತರ ಗಂಧ ಪ್ರಸಾದವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಸುಬ್ಬ ಜಿ. ದೇವಾಡಿಗ, ಗೌ. ಪ್ರ. ಕಾರ್ಯದರ್ಶಿ ಶ್ರೀ ಬಿ.ಎಂ. ದೇವಾಡಿಗ, ಮಹಿಳಾ ವಿಭಾಗದ ಅಧ್ಯಕ್ಷೆ ಶ್ರೀಮತಿ ಸೀತಾ ಎಂ. ದೇವಾಡಿಗ ಹಾಗೂ ಉಪಾಧ್ಯಕ್ಷೆ ಶ್ರೀಮತಿ ಸುಶೀಲಾ ಎಸ್. ದೇವಾಡಿಗ, ಮಹಿಳಾ ವಿಭಾಗದ ಕಾರ್ಯದರ್ಶಿ ಶ್ರೀಮತಿ  ಶಶಿಕಲಾ ಎಂ. ದೇವಾಡಿಗ ಹಾಗೂ ಸಂಘದ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.