ದೇವಾಡಿಗ ವೆಲ್ಫೇರ್ ಅಸೋಸಿಯೇಷನ್ ಮುಂಬಯಿ ಇದರ 37ನೇ ವಾರ್ಷಿಕೋತ್ಸವ ಸಮಾರಂಭ: ಸದಸ್ಯರಿಗೆ ಆಹ್ವಾನ

2025/01/04

ದೇವಾಡಿಗ ವೆಲ್ಫೇರ್ ಅಸೋಸಿಯೇಷನ್ ಮುಂಬಯಿ ಇದರ 37ನೇ ವಾರ್ಷಿಕೋತ್ಸವ ಸಮಾರಂಭವು ಜ. 5 ರಂದು ರವಿವಾರ ಮೈಸೂರ್ ಅಸೋಸಿಯೇಷನ್, ಮಾಟುಂಗಾ ಇಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಸುಬ್ಬಾ ಜಿ. ದೇವಾಡಿಗರ ಅಧ್ಯಕ್ಷತೆಯಲ್ಲಿ ನೆರವೇರಲಿರುವ ಈ ವಾರ್ಷಿಕೋತ್ಸವದ ಮುಖ್ಯ ಅತಿಥಿಯಾಗಿ ದೇವರಾಯ ಎಂ. ಶೇರಿಗಾರ್ (ಆಡಳಿತ ನಿರ್ದೇಶಕರು - ದೇವು ಟೂಲ್ಸ್ ಪ್ರೈ. ಲಿ.,) ಗೌರವ ಅತಿಥಿಯಾಗಿ ಕೃಷ್ಣ ವೈ. ಶೆಟ್ಟಿ (ಆಡಳಿತ ನಿರ್ದೇಶಕರು -ಕೃಷ್ಣ ಪ್ಯಾಲೇಸ್ ಗ್ರೂಪ್ ಆಫ್ ಹೊಟೇಲ್ಸ್ ) ಉಪಸ್ಥಿತರಿರುವರು.

ಅಂದು ಬೆಳಿಗ್ಗೆ 9 ಗಂಟೆಯಿಂದ ದೇವಾಡಿಗ ಸಮಾಜದ ವಿವಿಧ ವಯೋಮಾನದವರಿಗಾಗಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಮಹಿಳಾ ವಿಭಾಗದವರಿಂದ ಹಳದಿ ಕುಂಕುಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನದ ನಂತರ ಸಭಾ ಕಾರ್ಯಕ್ರಮ, ಬಹುಮಾನ ವಿತರಣೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಪ್ರತಿಭಾನ್ವಿತರಿಗೆ ವಿಶೇಷವಾಗಿ ಗೌರವಿಸಲಾಗುವುದು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಮಹಿಳಾ ಹಾಗೂ ಯುವ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Next Post Previous Post
No Comment
Add Comment
comment url
sr7themes.eu.org