ಯಶಸ್ವಿಯಾಗಿ ಸಂಪನ್ನಗೊಂಡ ವಾರ್ಷಿಕ ಕ್ರಿಡಾಕೂಟ, ಕ್ರಿಕೆಟ್ ಟೂರ್ನಮೆಂಟ್.
2018/12/28
ಮುಂಬೈಯ ಪ್ರತಿಷ್ಠಿತ ಸಂಘ ಸಂಸ್ಥೆಗಳಲ್ಲಿ ಒಂದಾದ ದೇವಾಡಿಗ ವೆಲ್ಫೇರ್ ಅಸೋಸಿಯೇಷನ್ ಮುಂಬೈ ಇದರ ಯುವ ವಿಭಾಗದ ನೇತೃತ್ವದಲ್ಲಿ ವಾರ್ಷಿಕ ಕ್ರೀಡಾಕೂಟ ಮತ್ತು ಡಿ.ಪಿ.ಎಲ್ ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 16 ರಂದು ಮಾಟುಂಗಾ ಖಾಲ್ಸಾ ಕಾಲೇಜು ಮೈದಾನದಲ್ಲಿ ವಿಜೃಂಭಣೆಯಿಂದ ಜರಗಿತು.
ಈ ಕ್ರೀಡಾಕೂಟದಲ್ಲಿ ಕ್ರಿಕೆಟ್ ಮತ್ತು ವಿವಿಧ ಆಟೋಟ ಸ್ಪರ್ಧೆಗಳು ದೇವಾಡಿಗ ಬಾಂಧವರಿಗಾಗಿ ಆಯೋಜಿಸಲಾಗಿದ್ದು, ವಿಶೇಷವಾಗಿ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ 9 ತಂಡಗಳು ಭಾಗವಹಿಸಿದ್ದು, ಅಂತಿಮ ಸುತ್ತಿನಲ್ಲಿ ಕೃಷ್ಣ ದೇವಾಡಿಗ ನೇತೃತ್ವದ "ಯೋಗಿ ಕ್ಲಾಸ್ಸೆಸ್" ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದರೇ, ದೇವೇಂದ್ರ ದೇವಾಡಿಗ ನೇತೃತ್ವದ "ಬಿ.ಡಿ.ಕೆ ಫ್ರೆಂಡ್ಸ್" ತಂಡವು ರನ್ನರ್ ಅಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.
ಬೆಳಿಗ್ಗೆ 8.30 ರಿಂದ ಆರಂಭಗೊಂಡ ಈ ಕ್ರೀಡಾಕೂಟವನ್ನು ಸಂಘದ ಗೌರವ ಉಪಾಧ್ಯಕ್ಷರಾದ ನಾಗರಾಜ್ ಪಡುಕೋಣೆ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಅಲ್ಲದೆ ಬ್ಯಾಟಿಂಗ್ ಮಾಡುವ ಮೂಲಕ ಕ್ರಿಕೆಟ್ ಪಂದ್ಯಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.
ಕ್ರೀಡಾಕೂಟದಲ್ಲಿ ಸಂಘದ ಉಪಾಧ್ಯಕ್ಷ ನಾಗರಾಜ ಪಡುಕೋಣೆ, ಸಂಘದ ಅಧ್ಯಕ್ಷ ಸುಬ್ಬ ಜಿ. ದೇವಾಡಿಗ, ಉಪಾಧ್ಯಕ್ಷ ಎನ್. ಎನ್. ದೇವಾಡಿಗ, ಗೌರವ ಪ್ರಧಾನ ಕಾರ್ಯದರ್ಶಿ ಶ್ರೀ ಬಿ.ಎಂ ದೇವಾಡಿಗ, ದೇವಾಡಿಗ ಸಂಘ ಮುಂಬೈ ಇದರ ಪ್ರಧಾನ ಕಾರ್ಯದರ್ಶಿ ಶ್ರೀ ವಿಶ್ವನಾಥ್ ದೇವಾಡಿಗ, ಸಂಘದ ಮಾಜಿ ಅಧ್ಯಕ್ಷ ಶ್ರೀ ಎಸ್.ವಿ ದೇವಾಡಿಗ, ಮಹಿಳಾ ವಿಭಾಗದ ಅಧ್ಯಕ್ಷೆ ಶ್ರೀಮತಿ ಸೀತಾ ಎಂ. ದೇವಾಡಿಗ, ಯುವ ವಿಭಾಗದ ಅಧ್ಯಕ್ಷ ಶ್ರೀ ರವೀಂದ್ರ ದೇವಾಡಿಗ ಉಪಸ್ಥಿತರಿದ್ದು ಶುಭ ಹಾರೈಸಿದರು.
ವಿವಿಧ ವಯೋಮಾನದವರಿಗೆ ಹಾಗೂ ಚಿಕ್ಕ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿದ್ದು ಹೆಚ್ಚಿನ ದೇವಾಡಿಗ ಬಾಂಧವರು ಭಾಗವಹಿಸಿದ್ದರು.
ಈ ವರ್ಷದ ಕ್ರೀಡಾಕೂಟಕ್ಕೆ ಪ್ರಾಯೋಜಕತ್ವ ವಹಿಸಿಕೊಂಡ ಹಾಗೂ ಕ್ರೀಡಾ ಕೂಟಕ್ಕೆ ಜಾಹೀರಾತು ನೀಡಿ ಸಹಕರಿಸಿದ ಎಲ್ಲರಿಗೂ ಸಂಘದ ಕಾರ್ಯಕಾರಿ ಸಮಿತಿಯ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು.
ಕ್ರಿಕೆಟ್ ಪಂದ್ಯಾಟದ ತೀರ್ಪುಗಾರರಾಗಿ ಸಹಕರಿಸಿದ ಶ್ರೀ ಧಾರಾ ದೇವಾಡಿಗ, ಶ್ರೀ ಹರೀಶ್ ಉಪ್ರಳ್ಳಿ, ಶ್ರೀ ರಾಜೇಂದ್ರ ಪೂಜಾರಿ ಇವರುಗಳನ್ನು ಸಂಘದ ಪರವಾಗಿ ಅಭಿನಂದಿಸಲಾಯಿತು.
ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಿ ಅಭಿನಂದಿಸಲಾಯಿತು. ಕ್ರೀಡಾಕೂಟದ ಪ್ರಯುಕ್ತ ಬೆಳಿಗ್ಗೆ ಲಘು ಉಪಹಾರ ಹಾಗೂ ಮಧ್ಯಾಹ್ನ ಪ್ರೀತಿ ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು.
ಜನವರಿ 20 ರಂದು ಎನ್.ಕೆ.ಇ. ಎಸ್ ಪ್ರೌಢಶಾಲೆ, ಇಂದೂಲಾಲ್ ಭುವಾ ಮಾರ್ಗ, ವಡಾಲಾ, ಮುಂಬೈ ಇಲ್ಲಿ ಸಂಘದ 31 ನೇ ವಾರ್ಷಿಕೋತ್ಸವ ಸಮಾರಂಭ ನೆರವೇರಲಿರುವುದು.
ವಾರ್ಷಿಕೋತ್ಸವಕ್ಕೂ ಮೊದಲು ಮಹಿಳೆಯರಿಗಾಗಿ ಅಡುಗೆ ಸ್ಪರ್ಧೆ, ರಂಗೋಲಿ ಸ್ಪರ್ಧೆ ಹಾಗೂ ಮಕ್ಕಳಿಗಾಗಿ ಡ್ರಾಯಿಂಗ್, ಸಿಂಗಿಂಗ್ ಸ್ಪರ್ಧೆಗಳನ್ನು ಡಿಸೇಂಬೆರ್ 30, 2018 ರಂದು ಮಧ್ಯಾಹ್ನ 3.30 ರಿಂದ ಮೈಸೂರು ಅಸ್ಸೊಸಿಯೆಷನ್, ಮಾತುಂಗ ಇಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲೂ ಕೊಡ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ವಿನಂತಿಸಿದ್ದಾರೆ.
ಫೋಟೋಗ್ರಾಫರ್ : ಪ್ರಭಾಕರ್ ದೇವಾಡಿಗ
